ಮಂಗಳೂರು: “ನೈತಿಕತೆಯೇ ಸ್ವಾತಂತ್ರ್ಯ” ಎಂಬ ಕೇಂದ್ರೀಯ ವಿಷಯದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗವು ಸೆಪ್ಟೆಂಬರ್ ತಿಂಗಳ 1 ರಿಂದ 30 ರ ವರೆಗೆ ರಾಷ್ಟ್ರವ್ಯಾಪಿ ಅಭಿಯಾನವನ್ನು ಹಮ್ಮಿಕೊಂಡಿದೆ.
ಇದರ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್, ಮಂಗಳೂರು ಮಹಿಳಾ ವಿಭಾಗವು ಮಂಗಳೂರು ನಗರಮಟ್ಟದಲ್ಲಿ ಸಾರ್ವಜನಿಕರಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಹಾಗೂ 30 ವರ್ಷಕ್ಕಿಂತ ಕೆಳಗಿನ ಮಹಿಳೆಯರು ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆಗಳು ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ನಡೆಯಲಿದೆ.
ನಿಮ್ಮ ಬರಹ A4 ಸೈಜ್ ನ ಮೂರು ಪುಟಗಳಿಗೆ ಸೀಮಿತವಾಗಿರಲಿ.
ಪ್ರಥಮ ಬಹುಮಾನ 3000, ದ್ವಿತೀಯ ಬಹುಮಾನ 2000 ಹಾಗೂ ತೃತೀಯ ಬಹುಮಾನ 1000 ರೂಪಾಯಿಗಳು.
ಬರಹದೊಂದಿಗೆ ನಿಮ್ಮ ಹೆಸರು, ಜನ್ಮ ದಿನಾಂಕವನ್ನು ನಮೂದಿಸಬೇಕಾಗಿದೆ.
ಬರಹ ಕಳುಹಿಸಬೇಕಾದ ವಿಳಾಸ: ಪ್ರಬಂಧ ಸ್ಪರ್ಧೆ ವಿಭಾಗ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರೋಡ್, ಬಂದರ್, ಮಂಗಳೂರು. 1
ಸಾಫ್ಟ್ ಕಾಪಿಗಳನ್ನು ಸ್ವೀಕರಿಸಲಾಗುವುದಿಲ್ಲ. ಸೆಪ್ಟೆಂಬರ್ 21,2024ರ ಒಳಗೆ ತಲುಪುವಂತೆ ಕಳುಹಿಸಬೇಕಾಗಿ ಕೋರಲಾಗಿದೆ.