Home / ವಾರ್ತೆಗಳು / ಸುನ್ನಿ ವಕ್ಫ್ ಮಂಡಳಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ

ಸುನ್ನಿ ವಕ್ಫ್ ಮಂಡಳಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ

ಲಕ್ನೊ,ನ.21: ಸುನ್ನಿ ವಕ್ಫ್ ಮಂಡಳಿ ಬಾಬರಿ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ತಿಳಿಸಿದೆ. ವರದಿಯಾಗಿರುವ ಪ್ರಕಾರ ಸುನ್ನಿ ವಕ್ಫ್ ಮಂಡಳಿಯ ಅಧ್ಯಕ್ಷ ಜಾಫರ್ ಫಾರೂಕಿ ಸುದ್ದಿ ಚ್ಯಾನಲೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯಾವುದೇ ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ನಾವು ಯಾವಾಗಲು ಸುಪ್ರೀಂ ಕೋರ್ಟಿನ ತೀರ್ಪು ಸ್ವೀಕರಿಸುವೆವೆಂದು ಹೇಳುತ್ತಿದ್ದೆವು. ಅದರಂತೆ ನಡೆದುಕೊಳ್ಳುತ್ತೇವೆ ಎಂದು ಜಾಫರ್ ಫಾರೂಕಿ ಹೇಳಿದ್ದಾರೆ. ಇದೇ ವೇಳೆ ಇನ್ನೋರ್ವ ಬಾಬರಿ ಪ್ರಕರಣದ ಕಕ್ಷಿ ನಾವು ಕೂಡ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಆಲ್ ಇಂಡಿಯ ಮುಸ್ಲಿಂ ಪರ್ಸನಲ್ ಲಾ ಬೋರ್ಡು ರವಿವಾರ ಸುಪ್ರೀಂಕೋರ್ಟಿನ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದೆ. ಇದೇ ವೇಳೆ ಜಮ್‍ಇಯ್ಯತ್ತುಲ್ ಉಲೆಮಾ ಮರುಪರಿಶೀಲನಾ ಅರ್ಜಿಯನ್ನು ಪ್ರತ್ಯೇಕವಾಗಿ ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಿದೆ ಎಂದು ತಿಳಿಸಿದೆ.

SHARE THIS POST VIA

About editor

Check Also

ಲೇಖಕ ಅಬೂಝೀಶನ್ ರವರ ‘ಪ್ರವಾದಿ ಮುಹಮ್ಮದ್ (ಸ) ಸ್ನೇಹದ ಪ್ರತೀಕ’ ಪುಸ್ತಕ ಲೋಕಾರ್ಪಣೆ

ಮಂಗಳೂರು: ಝೀಶಾನ್ ಪ್ರಕಾಶನದ ವತಿಯಿಂದ ಶಾದಿ ಮಹಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಝೀಶಾನ್ ಸಂಸ್ಥೆಯ ಮಾಲಕ ಇಸ್ಮಾಈಲ್, ಲೇಖಕ …