ಸಿದ್ದಾಪುರ,ನ.12:- ಜಮಾಅತೆ ಇಸ್ಲಾಮಿ ಹಿಂದ್ ಸಿದ್ದಾಪುರ ಶಾಖೆಯ ವತಿಯಿಂದ ಪ್ರವಾದಿ ಜೀವನ ಮತ್ತು ಸಂದೇಶ ಪ್ರಚಾರಾರ್ಥ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಚಾಲನೆ ನೀಡಿದರು. ನಂತರ ಮಾತನಾಡಿ ಸ್ವಚ್ಚತೆಗೆ ಆದ್ಯತೆ ನೀಡಿ ಶುಚಿತ್ವ ಕಾಪಾಡಿಕೊಂಡಲ್ಲಿ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದ್ದು ಸ್ವಚ್ಛ ಗ್ರಾಮವನ್ನಾಗಿಸಲು ಎಲ್ಲರೂ ಕೈಜೋಡಿಸಬೇಕಾಗಿದೆ.
ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ನೇತೃತ್ವದಲ್ಲಿ ನಡೆಯುತ್ತಿರುವ ಸ್ವಚ್ಛತಾ ಆಂದೋಲನದ ಅಂಗವಾಗಿ ಅಂಗನವಾಡಿ ಕೇಂದ್ರಗಳ ಆವರಣ ಸೇರಿದಂತೆ ಹಲವೆಡೆ ಶ್ರಮದಾನದ ಮೂಲಕ ಸ್ವಚ್ಛತೆಗೆ ಮಹಿಳೆಯರು, ಮಕ್ಕಳು ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭ ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಸಂಚಾಲಕ ಅಬ್ದುಲ್ ಗಫೂರ್, ಪರಿಸರ ಪ್ರೇಮಿ ರಾಜೇಂದ್ರ ಸಿಂಗ್, ಮಾಜಿ ಸೈನಿಕ ಅಶೋಕ್, ಎಸ್.ಐ.ಓ , ಜಿ.ಐ.ಓ, ಸಾಲಿಡಾರಿಟಿಯೂಥ್ ಮೂವ್ ಮೆಂಟ್ ಪದಾಧಿಕಾರಿಗಳಾದ ಅಶ್ರಫ್ ,ಹನೀಫ್, ಸಹಲಾ ಇಬಾದಿ , ಹಿಂದ್ ಗಫೂರ್, ಫಾತೀಮಾ, ಹಮೀದಾ ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು.
IslamKannada News Portal


