ಮಸೀದಿಗಳಲ್ಲಿ ಅಝಾನ್ಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಕೋರಿ ಬಜರಂಗದಳದ ನಾಯಕ ಶಕ್ತಿಸಿಂಹ ಝಾಲಾ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದ್ದು, ಮನವಿಯನ್ನು ಸಂಪೂರ್ಣವಾಗಿ ತಪ್ಪುಕಲ್ಪನೆ ಎಂದು ಹೇಳಿದೆ.
ಧ್ವನಿವರ್ಧಕಗಳ ಮೂಲಕ ಅಝಾನ್ ಕೊಡುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ. ಇದು ಜನರ ವಿಶೇಷವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿದಾರ ಬಜರಂಗದಳದ ನಾಯಕ ಕೋರ್ಟ್ನಲ್ಲಿ ವಾದಿಸಿದ್ದರು.
ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಅನಿರುದ್ಧ ಪಿ ಮಾಯೆ ಅವರ ವಿಭಾಗೀಯ ಪೀಠವು, ಅರ್ಜಿ ವಿಚಾರಣೆಯ ವೇಳೆ ದೇವಾಲಯದಲ್ಲಿ ಆರತಿ ಸಮಯದಲ್ಲಿ ಗಂಟೆ ಶಬ್ಧವು ಹೊರಗೆ ಕೇಳಿಸುವುದಿಲ್ಲವೇ ಎಂದ ಪೀಠವು, ಯಾವ ಆಧಾರದ ಮೇಲೆ ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂದು ಅರ್ಜಿದಾರರು ಹೇಳುತ್ತಿದ್ದಾರೆ ಎಂದು ಪ್ರಶ್ನಿಸಿದೆ.
If 10 mins of Azaan causes noise pollution, what about loud music, bhajan in temples? Gujarat High Court rejects PIL against Azaan
Read full story: https://t.co/xFzcMUAY7y pic.twitter.com/cI0JkPcO94
— Bar & Bench (@barandbench) November 29, 2023
ಅಝಾನ್ನ್ನು ದಿನದಲ್ಲಿ ಹೆಚ್ಚೆಂದರೆ 10 ನಿಮಿಷಗಳಂತೆ 5 ಬಾರಿ ಕೂಗಲಾಗುತ್ತದೆ. ಬೆಳಿಗ್ಗೆ ಧ್ವನಿವರ್ಧಕದ ಮೂಲಕ ಅಝಾನ್ ನೀಡುವ ಮಾನವ ಧ್ವನಿಯು ಶಬ್ದ ಮಾಲಿನ್ಯವನ್ನು ಹೇಗೆ ಉಂಟು ಮಾಡುತ್ತದೆ ಎಂದು ನಾವು ತಿಳಿಯಲು ವಿಫಲರಾಗಿದ್ದೇವೆ ಎಂದು ಕೋರ್ಟ್ ಹೇಳಿದೆ.
ನಾವು ಈ ರೀತಿಯ ಪಿಐಎಲ್ನ್ನು ಪರಿಗಣಿಸುತ್ತಿಲ್ಲ. ಇದು ವರ್ಷಗಳಿಂದ ನಡೆದುಕೊಂಡು ಬಂದಿರುವ ನಂಬಿಕೆ ಮತ್ತು ಆಚರಣೆಯಾಗಿದೆ. ಇದು 5-10 ನಿಮಿಷಗಳ ಕಾಲ ಇರುತ್ತದೆ. ಮುಂಜಾನೆ 3 ಗಂಟೆಗೆ ದೇವಸ್ಥಾನದಲ್ಲಿ, ಡ್ರಮ್ಸ್ ಮತ್ತು ಸಂಗೀತದೊಂದಿಗೆ ಬೆಳಿಗ್ಗೆ ಆರತಿ ಕೂಡ ಪ್ರಾರಂಭವಾಗುತ್ತದೆ. ಹಾಗಾದರೆ ಇದು ಯಾರಿಗೂ ಯಾವುದೇ ರೀತಿಯ ಶಬ್ದವನ್ನು ಉಂಟು ಮಾಡುವುದಿಲ್ಲವೇ? ಗಂಟೆಯ ಶಬ್ಧ ದೇವಾಲಯದ ಹೊರಗೆ ಕೇಳಿಸುವುದಿಲ್ಲವೇ ಎಂದು ಕೋರ್ಟ್ ಪ್ರಶ್ನಿಸಿದೆ.
ದಿನದ ಬೇರೆ ಬೇರೆ ಅವಧಿಗಳಲ್ಲಿ 10 ನಿಮಿಷಗಳ ಕಾಲ ಆಝಾನ್ ಕೂಗುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಕುರಿತು ವೈಜ್ಞಾನಿಕ ರೀತಿಯ ಆಧಾರ ಒದಗಿಸಲು ಅರ್ಜಿದಾರರು ವಿಫಲವಾಗಿದ್ದಾರೆ. ಹಾಗಾಗಿ ಇದು ಸಂಪೂರ್ಣ ತಪ್ಪು ತಿಳಿವಳಿಕೆಯಿಂದ ಕೂಡಿದೆ. ಈ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪುರಸ್ಕರಿಸುವುದಿಲ್ಲ’ ಎಂದು ಉಲ್ಲೇಖಿಸುತ್ತಾ ಗುಜರಾತ್ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
Azaan is faith and practice going on for years together. It is not even for 10 minutes (a day). What about your DJ? That creates a lot of pollution: Gujarat High Court rejects PIL which alleged Azaan causes noise pollution
Read story: https://t.co/xFzcMUAY7y pic.twitter.com/8XrrI8PLiA
— Bar & Bench (@barandbench) November 29, 2023
IslamKannada News Portal
