Home / ವಾರ್ತೆಗಳು / ಜಗತ್ತಿನಲ್ಲಿಯೇ ಅತ್ಯಂತ ಸುರಕ್ಷಿತ ರಾಷ್ಟ್ರಗಳ ಪಟ್ಟಿಯಲ್ಲಿ ಕತರ್ ಗೆ ಮೊದಲ ಸ್ಥಾನ

ಜಗತ್ತಿನಲ್ಲಿಯೇ ಅತ್ಯಂತ ಸುರಕ್ಷಿತ ರಾಷ್ಟ್ರಗಳ ಪಟ್ಟಿಯಲ್ಲಿ ಕತರ್ ಗೆ ಮೊದಲ ಸ್ಥಾನ

ಜಗತ್ತಿನಲ್ಲೇ ಅತ್ಯಂತ ಸುರಕ್ಷಿತ ದೇಶ ಯಾವುದು ಎಂಬ ಪ್ರಶ್ನೆಗೆ ಉತ್ತರ ಲಭಿಸಿದೆ. ಕತಾರ್ ಈ ಗೌರವಕ್ಕೆ ಪಾತ್ರವಾಗಿದೆ.. ಆನ್ಲೈನ್ ಡಾಟಾಬೇಸ್ ಸಂಸ್ಥೆಯಾದ ನಂಬಿಯೋ ತಯಾರಿಸಿದ ಇತ್ತೀಚಿನ ವರದಿಯ ಪ್ರಕಾರ ಜಗತ್ತಿನ ಅತ್ಯಂತ ಸುರಕ್ಷಿತ ರಾಷ್ಟ್ರದ ಪಟ್ಟಿಯಲ್ಲಿ ಕತಾರ್ ಗೆ ಮೊದಲ ಸ್ಥಾನ ಲಭಿಸಿದೆ

ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಯುಎಇ ಗೆ ಲಭಿಸಿದರೆ 3ನೇ ಸ್ಥಾನ ‌  ತೈವಾನ್ ಪಾಲಾಗಿದೆ. ಅಪರಾಧ ಕೃತ್ಯಗಳ ಪ್ರಮಾಣವನ್ನು ಪರಿಗಣಿಸಿ ಈ ಪಟ್ಟಿಯನ್ನು ತಯಾರಿಸಲಾಗಿದೆ.

ವಿಶೇಷವಾಗಿ ರಾತ್ರಿ ಮತ್ತು ಹಗಲಲ್ಲಿ ಒಂಟಿಯಾಗಿ ಪ್ರಯಾಣಿಸುವ ಮಹಿಳೆಯರು ಮತ್ತು ಪುರುಷರ ಸುರಕ್ಷತೆಯನ್ನು ಪರಿಗಣಿಸಿ ಈ ಪಟ್ಟಿಯಲ್ಲಿ ಪರಿಗಣಿಸಲಾಗಿದೆ. ಹಾಗೆಯೇ ಇನ್ನಿತರ ಅಪರಾಧ ಪ್ರಕರಣಗಳನ್ನೂ ಪರಿಗಣಿಸಲಾಗಿದೆ. ಇವೆಲ್ಲವನ್ನೂ ಲೆಕ್ಕ ಹಾಕಿದರೆ ಅತ್ಯಂತ ಸುರಕ್ಷಿತ ರಾಷ್ಟ್ರವಾಗಿ ಖತರ್ ಒಂದನೇ ಸ್ಥಾನದಲ್ಲಿ ನಿಲ್ಲುತ್ತದೆ ಎಂದು ವರದಿ ತಿಳಿಸಿದೆ. ಒಟ್ಟು 142 ರಾಷ್ಟ್ರಗಳನ್ನು ಈ ಸರ್ವೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …