Home / ವಾರ್ತೆಗಳು / ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2022ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳ ಗೊಂಡಿರುತ್ತದೆ.

ಆಸಕ್ತ ಮುಸ್ಲಿಮ್ ಬರಹಗಾರರು ಕನ್ನಡದಲ್ಲಿ ಪ್ರಕಟಿತ 2022ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ಜೂನ್ 20ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು – 575001(ದೂ.ಸಂ. 9845054191, 0824 2410358) ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.

ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಹಾಗೂ ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …