Home / ವಾರ್ತೆಗಳು / 2023ಕ್ಕೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಕಾಮಗಾರಿ ಪೂರ್ಣ; ಇಂಡೊ ಕಲ್ಚರ್ ಫೌಂಡೇಷನ್‌ ಟ್ರಸ್ಟ್‌

2023ಕ್ಕೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಕಾಮಗಾರಿ ಪೂರ್ಣ; ಇಂಡೊ ಕಲ್ಚರ್ ಫೌಂಡೇಷನ್‌ ಟ್ರಸ್ಟ್‌

ಸುಪ್ರೀಂ ಕೋರ್ಟ್‌ ತೀರ್ಪಿನ ಅನುಸಾರವಾಗಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಯ ಕಾಮಗಾರಿ ಮುಂದಿನ ವರ್ಷದ ಡಿಸೆಂಬರ್‌ನೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಮಸೀದಿ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಇಂಡೊ ಕಲ್ಚರ್ ಫೌಂಡೇಷನ್‌ ಟ್ರಸ್ಟ್‌ ತಿಳಿಸಿದೆ.

2019ರಲ್ಲಿ ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿಗೆ ಅನುಸಾರವಾಗಿ ಮಸೀದಿ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಪ್ರತ್ಯೇಕವಾಗಿ ಐದು ಎಕರೆ ಜಾಗವನ್ನು ನೀಡಲಾಗಿತ್ತು. ಆ ಸ್ಥಳದಲ್ಲಿ ಮಸೀದಿ ನಿರ್ಮಿಸಲಾಗುತ್ತಿದ್ದು, ಅದರ ಕಾಮಗಾರಿ 2023ರ ಡಿಸೆಂಬರ್‌ಗೆ ಪೂರ್ಣಗೊಳ್ಳುವ ಭರವಸೆಯನ್ನು ಟ್ರಸ್ಟ್‌ ಹೊಂದಿದೆ.

ಮಸೀದಿ ನಿರ್ಮಾಣಕ್ಕಾಗಿ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ರಚಿಸಿರುವ ಇಂಡೊ ಕಲ್ಚರ್ ಫೌಂಡೇಷನ್‌ ಟ್ರಸ್ಟ್‌ ಕಾರ್ಯದರ್ಶಿ ಅಥಾರ್‌ ಹುಸೇನ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಸ್ತಾವಿತ ಮಸೀದಿ, ಆಸ್ಪತ್ರೆ, ಸಮುದಾಯ ಅಡುಗೆ ಮನೆ, ಗ್ರಂಥಾಲಯ ಮತ್ತು ಸಂಶೋಧನಾ ಕೇಂದ್ರದ ನಕ್ಷೆಗೆ ನವೆಂಬರ್‌ ಅಂತ್ಯದೊಳಗೆ ಅನುಮೋದನೆ ಸಿಗಲಿದ್ದು, ಶೀಘ್ರವಾಗಿ ಮಸೀದಿ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುತ್ತೇವೆ” ಎಂದಿದ್ದಾರೆ.

“ಕಾಮಗಾರಿ ಪೂರ್ಣಗೊಳಿಸುವ ಸಂಬಂಧ ಗಡುವು ನಿಗದಿಪಡಿಸದಿದ್ದರೂ ಒಂದು ವರ್ಷದೊಳಗೆ ಮಸೀದಿ ನಿರ್ಮಿಸಲಾಗುವುದು. 100 ಹಾಸಿಗೆಗಳುಳ್ಳ ಆಸ್ಪತ್ರೆಯನ್ನು ಮೊದಲಿಗೆ ಆರಂಭಿಸಿ ನಂತದ ಅದನ್ನು 200 ಹಾಸಿಗೆಗಳ ಸೌಲಭ್ಯಕ್ಕೆ ಮೇಲ್ದರ್ಜೆಗೇರಿಸಲಾಗುವುದು. ಮಸೀದಿಯಲ್ಲದೆ ಇತರೆ ಕಟ್ಟಡಗಳನ್ನು ನಿರ್ಮಿಸುವ ಸಂಬಂಧ ಅಗತ್ಯ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಹುಸೇನ್‌ ತಿಳಿಸಿದ್ದಾರೆ.

 

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …