Home / ವಾರ್ತೆಗಳು / ದುಬೈ ಅಪರಾಧ ಪ್ರಕರಣಗಳಲ್ಲಿ ಭಾರೀ ಇಳಿಕೆ

ದುಬೈ ಅಪರಾಧ ಪ್ರಕರಣಗಳಲ್ಲಿ ಭಾರೀ ಇಳಿಕೆ

ಅಬುಧಾಬಿ: ದುಬೈಯಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ವರ್ಷಗಳು ಉರುಳಿದಂತೆ ಅಪರಾಧ ಕೃತ್ಯಗಳಲ್ಲಿ ಹೆಚ್ಚಳವಾಗುವ ಸುದ್ದಿಗಳು ಸಾಮಾನ್ಯವಾಗಿರುತ್ತವೆ. ಆದರೆ ದುಬೈ ಇದಕ್ಕಿಂತ ಭಿನ್ನವಾಗಿದೆ. 2021ಕ್ಕೆ ಹೋಲಿಸಿದರೆ 2022 ರಲ್ಲಿ ಅಪರಾಧ ಪ್ರಕರಣಗಳಲ್ಲಿ 63 ಶೇಕಡಾ ಕಡಿಮೆಯಾಗಿದೆ ಎಂದು ವರದಿಯಾಗಿದೆ.

ಪೊಲೀಸ್ ವ್ಯವಸ್ಥೆ ಅತ್ಯಂತ ಸಮಗ್ರವಾಗಿ ಮತ್ತು ಬದ್ಧತೆಯಿಂದ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ಅಪರಾಧಿಗಳ ಪತ್ತೆ ಕೂಡ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನಡೆದಿದೆ ಎಂದು ದುಬೈ ಪೊಲೀಸರು ತಿಳಿಸಿದ್ದಾರೆ

ಅಪರಾಧ ಪ್ರಕರಣಗಳಿಗೆ ಸಂಬಂಧಿಸಿ ಹಲವು ವಿಭಾಗಗಳನ್ನು ಮಾಡಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಾಗೆಯೇ ಅಪರಾಧ ನಡೆಯದಂತೆ ಜನಜಾಗೃತಿ ಕೂಡ ಸಾಕಷ್ಟು ಪ್ರಮಾಣದಲ್ಲಿ ನಡೆಸಲಾಗಿದೆ. ಇದರ ಪರಿಣಾಮವಾಗಿ ಈ ಫಲಿತಾಂಶ ಲಭಿಸಿದೆ ಎಂದು ದುಬೈ ಪೊಲೀಸರು ತಿಳಿಸಿದ್ದಾರೆ.

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …