ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಅಧ್ಯಕ್ಷರಾಗಿ ಮಧ್ಯಪ್ರದೇಶದ ಖ್ಯಾತ ಇಸ್ಲಾಮಿಕ್ ವಿದ್ವಾಂಸ ಚಿಂತಕ ಹಾಗೂ ಮಂಡಳಿಯ ಹಿರಿಯ ಸದಸ್ಯ ಎಂ ಐ ಖಾಲಿದ್ ಸೈಫುಲ್ಲಾ ರಹ್ಮಾನಿ ಆಯ್ಕೆಯಾಗಿದ್ದಾರೆ.
ಮಧ್ಯಪ್ರದೇಶದ ಮಾಹುದ ಎಂಬಲ್ಲಿ ನಡೆದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಮಹಾ ಸಭೆಯಲ್ಲಿ ಐದನೇ ಅಧ್ಯಕ್ಷರಾಗಿ ಖಾಲಿದ್ ಸೈಫುಲ್ಲಾ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಮಂಡಳಿ ಅಧ್ಯಕ್ಷರಾಗಿದ್ದ ಮೌಲಾನ ಮೊಹಮ್ಮದ್ ರಬಿ ಹಸನಿ ನದ್ವಿಯವರ ನಿಧನದ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಿತು.
ಇದೇ ವೇಳೆ ಜಮಾಅತೆ ಇಸ್ಲಾಮಿ ಹಿಂದ್ ನ ರಾಷ್ಟ್ರೀಯ ಅಧ್ಯಕ್ಷ ಸಯ್ಯದ್ ಸಆದತುಲ್ಲಾ ಹುಸೇನಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜಮಾಅತೆ ಇಸ್ಲಾಮಿ ಹಿಂದ್ ನ ರಾಷ್ಟ್ರೀಯ ಸಲಹಾ ಸಮಿತಿ ಸದಸ್ಯರಾದ ಡಾಕ್ಟರ್ ಎಸ್ ಕ್ಯೂ ಆರ್ ಇಲ್ಯಾಸ್ ಅವರು ಮಂಡಳಿಯ ವಕ್ತಾರಾಗಿ ಆಯ್ಕೆಯಾಗಿದ್ದಾರೆ.
IslamKannada News Portal
