Home / ವಾರ್ತೆಗಳು / ಕೋವಿಡ್-19 ಶವ ಸಂಸ್ಕಾರ ತರಬೇತಿ: ಎಸ್.ಐ.ಓ ಕಾರ್ಯಕರ್ತರು ಭಾಗಿ

ಕೋವಿಡ್-19 ಶವ ಸಂಸ್ಕಾರ ತರಬೇತಿ: ಎಸ್.ಐ.ಓ ಕಾರ್ಯಕರ್ತರು ಭಾಗಿ

ಉಡುಪಿ,ಆ.3: ಜಿಲ್ಲಾ ಸರಕಾರಿ ಆಸ್ಪತ್ರೆ ಶವಾಗಾರದ ಬಳಿ ಸೋಮವಾರ ನೊಂದಾಯಿಸಿಕೊಂಡ ಸ್ವಯಂ ಸೇವಕರಿಗೆ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರ ಮಾಡುವ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಉಡುಪಿ ಜಿಲ್ಲಾ ಎಸ್.ಐ.ಓ ಕಾರ್ಯಕರ್ತರು ಭಾಗವಹಿಸಿ ತರಬೇತಿ ಪಡೆದರು.

ಈ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ಜನರು ಜಾಗೃತರಾಗಿ ಇಂತ ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ಸ್ವಯಂ ಸೇವಕರ ಅಗತ್ಯ ಬಹಳಷ್ಟು ಇದೆ. ತಾವು ಸ್ವಯಂ ಪ್ರೇರಿತವಾಗಿ ಈ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಖುಷಿ ತಂದಿದೆ ಎಂದು ಹೇಳಿದರು.

ಫಾರೆನ್ಸಿಕ್ ತಜ್ಞ ಡಾ. ರಮೇಶ್ ಕುಂದರ್ ಸುರಕ್ಷತಾ ಕ್ರಮಗಳೊಂದಿಗೆ ಯಾವ ರೀತಿಯಲ್ಲಿ ಶವ ಸಂಸ್ಕಾರ ನಡೆಸಬಹುದೆಂಬುದರ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ. ರಮೇಶ್ ಕುಂದರ್, ಡಾ.ಪ್ರೇಮಾನಾಥ್,ಉಡುಪಿ ತಾಹಶೀಲ್ದಾರ್ ಪ್ರದೀಪ್ ಕುರುಡೇಕರ್, ಎಚ್.ಆರ್.ಎಸ್ ಸ್ವಯಂ ಸೇವಕ ಸಂಸ್ಥೆಯ ಹಸನ್ ಹೂಡೆ, ಎಸ್.ಐ.ಓ ರಾಜ್ಯ ಕಾರ್ಯದರ್ಶಿ ಯಾಸೀನ್ ಕೋಡಿಬೆಂಗ್ರೆ, ಎಸ್.ಐ.ಓ ಜಿಲ್ಲಾಧ್ಯಕ್ಷ ನಾಸೀರ್ ಗುಜ್ಜರ್ ಬೆಟ್ಟು, ಅಫ್ವಾನ್ ಹೂಡೆ ಉಪಸ್ಥಿತರಿದ್ದರು.

SHARE THIS POST VIA

About editor

Check Also

18ನೇ ಶತಮಾನದ ಕುರ್‌ಆನನ್ನು ಪ್ರತಿಜ್ಞಾವಿಧಿಗೆ ಬಳಸಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ

ಪ್ರತಿಜ್ಞಾವಿಧಿಯ ವೇಳೆ ನ್ಯೂಯಾರ್ಕ್ ಮೇಯರ್ ಝೋಹ್‌ರಾನ್ ಮಮ್ದಾನಿ ಎತ್ತಿ ಹಿಡಿದ ಪವಿತ್ರ ಕುರ್‌ಆನನ್ನು ಎಲ್ಲಿಂದ ತರಲಾಗಿತ್ತು ಎಂಬ ಪ್ರಶ್ನೆಗೆ ಇದೀಗ …