Home / ಪ್ರಶ್ನೋತ್ತರ / ಏಕದೇವ ವಿಶ್ವಾಸದ ಇಸ್ಲಾಮಿ ಕಲ್ಪನೆ ?

ಏಕದೇವ ವಿಶ್ವಾಸದ ಇಸ್ಲಾಮಿ ಕಲ್ಪನೆ ?

 

ಏಕದೇವ ವಿಶ್ವಾಸವು ಇಸ್ಲಾಮ್ ಧರ್ಮದ ಮುಲಭೂತ ವಿಶ್ವಾಸವಾಗಿದೆ. ಏಕದೇವ ವಿಶ್ವಾಸವೆಂಬ ತಳಹದಿಯ ಮೇಲೆಯೇ ಇಸ್ಲಾಮ್ ಧರ್ಮದ ಸೌಧ ನಿಂತಿದೆ. ಆದುದರಿಂದ ಇಸ್ಲಾಮ್ ಧರ್ಮದ ಬಗ್ಗೆ ತಿಳಿಯ ಬಯಸುವವರು ಮೊದಲು ಏಕದೇವ ವಿಶ್ವಾಸದ ಕುರಿತು ಸರಿಯಾಗಿ ಅರಿತಿರುವುದು ಅತ್ಯಗತ್ಯ. ಈ ಜಗತ್ತಿನ ಸೃಷ್ಟಿಕರ್ತ ಒಬ್ಬನೇ, ಅವನೇ ಸಮಸ್ತ ವಿಶ್ವವನ್ನೂ ಅದೊಳಗೊಂಡಿರುವ ಸಕಲ ಚರಾಚರಗಳನ್ನೂ ಸೃಷ್ಟಿಸಿದವನು. ಮನುಷ್ಯರನ್ನೂ ಇತರ ಜೀವಜಾಲಗಳನ್ನೂ ಅವನೇ ಪೋಷಿಸಿ ಬೆಳೆಸುತ್ತಿದ್ದಾನೆ. ಸರ್ವಲೋಕದ ಒಡೆತನ ಮತ್ತು ಆಧಿಪತ್ಯವು ಅವನಿಗೆ ಸೇರಿದೆ. ಆ ಏಕದೇವನನ್ನೇ ಪವಿತ್ರ ಕುರ್ಆನಿನಲ್ಲಿ ‘ಅಲ್ಲಾಹ್’ ಎಂದು ಕರೆಯಲಾಗಿದೆ. ಜಗತ್ತಿನ ಏಕೈಕ ಸೃಷ್ಟಿಕರ್ತನೂ ಪರಿಪಾಲಕನೂ ಒಡೆಯನೂ ಅಧಿಪತಿಯು ಅಲ್ಲಾಹನೇ ಆಗಿರುವಾಗ ಮನುಷ್ಯನ ಆರಾಧನೆ, ದಾಸ್ಯ ಮತ್ತು ಅನುಸರಣೆಗಳೂ ಆತನಿಗೆ ಸಲ್ಲಬೇಕೆಂಬುದು ಬುದ್ಧಿಯ ಬೇಡಿಕೆಯಾಗಿದೆ.

SHARE THIS POST VIA

About admin

Check Also

ಆತ್ಮಹತ್ಯೆ ಇಸ್ಲಾಮಿನ ದೃಷ್ಟಿಕೋನವೇನು?

ಪ್ರಶ್ನೆ: ಇಂದು ಹಲವಾರು ಆತ್ಮಹತ್ಯಾ ಪ್ರಕರಣಗಳು ನಡೆಯುತ್ತಿವೆ. ಈಗ ಮುಸ್ಲಿಮರೂ ಆ ಕೃತ್ಯವನ್ನೆಸಗುತ್ತಿದ್ದಾರೆ. ನಮ್ಮ ಊರಿನಲ್ಲಿ ಇತ್ತೀಚೆಗೆ ಮುಸ್ಲಿಮ್ ಮಹಿಳೆಯೋರ್ವರು …

Leave a Reply

Your email address will not be published. Required fields are marked *