ಮಂಗಳೂರು,ಸೆ.24:’ಬೇಕಲ್ ಉಸ್ತಾದ್’ ಎಂದೇ ಜನಪ್ರಿಯರಾಗಿದ್ದ ಹಿರಿಯ ವಿದ್ವಾಂಸ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ಹಾಜ್ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ್ (71) ರವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.
ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ರವರು ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರಾಗಿ, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ, ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
IslamKannada News Portal
